ಜಾನಪದ ಮತ್ತು ಅರ್ಥ
ಪುಸ್ತಕ: ಸುವರ್ಣ ಜಾನಪದ ಲೆವಿಸ್ತ್ರಾಸ್ ನ ಪ್ರಕಾರ ಮಿಥ್ ನ ಅರ್ಥ ಸೃಷ್ಟಿಯಾಗಿವುದು ಅವುಗಳ ಆಂತರಿಕ ವ್ಯವಸ್ಥೆಯಲ್ಲಿರುವ ದ್ವಿಧಾವೃತ್ತಿಯಲ್ಲಿ(binary opposition) (ಲೆವಿಸ್ತ್ರಾಸ್ ೧೯೭೮) ಈ ದ್ವಿಧಾವೃತ್ತಿಗಳು ಮಿಥ್ ನ ಆಂತರಿಕ ವ್ಯವಸ್ಥೆಯನ್ನು ವಿವರಿಸುತ್ತವೆ. ಭಾಷೆಯಲ್ಲಿ ಧ್ವನಿಗಳು ಹೇಗೋ ಜಾನಪದ ಪಠ್ಯಗಳಲ್ಲಿ ದ್ವಿಧಾವೃತ್ತಿಗಳು ಹಾಗೆ ವರ್ತಿಸುತ್ತಿರುತ್ತವೆ. ಈ ದ್ವಿಧಾವೃತ್ತಿಗಳು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿರುತ್ತವೆ ಎಂಬುದನ್ನು ಅರಿತುಕೊಳ್ಳುವುದೇ ಸಾಂಸ್ಕೃತಿಕ ಪದ್ಯಗಳ ರಚನೆಯನ್ನು ಅರಿಯುವ ವಿಧಾನ. ಈ ದ್ವಿಧಾವೃತ್ತಿಗಳು ಸಂಧಿಸುವಲ್ಲೇ ಅರ್ಥ ಅಡಗಿ ಕುಳಿತ್ತಿರುತ್ತದೆ. ಇದನ್ನು ಲೆವಿಸ್ತ್ರಾಸ್ ಗುರುತಿಸುತ್ತಾನೆ. ಆದರೆ, ದ್ವಿಧಾವೃತ್ತಿಗಳು ಯಾವುದೇ ಕಥಾನಕದಲ್ಲೂ ಒಂದರ ಮೇಲೊಂದು ಆಡುತ್ತಿರುತ್ತದೆ.ಈ ರೀತಿ ಆಡುವ ಕ್ರಿಯೆಯೇ ದ್ವಿಧಾವೃತ್ತಿಗಳು ಸಂಧಿಸುವ ತಾಣ. ದ್ವಿಧಾವೃತ್ತಿಗಳು ಒಂದರ ಮೇಲೊಂದು ಆಡುವುದರಿಂದ ರಚನೆಗೆ ಚಾಲನೆ ಸಿಗುತ್ತದೆ. ಈ ಚಲನೆಯಿಂದ ಅರ್ಥಗಳು ರೂಪಾಂತರಕ್ಕೆ ಒಳಗಾಗುತ್ತಿರುತ್ತವೆ. ಇದನು…